ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿ.!

ದಾವಣಗೆರೆ: ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಆತಂಕದ ವಾತಾವರಣ ಮತ್ತಷ್ಟು ಹೆಚ್ಚಾಗಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಸುಮಯಾ ಕೌಸರ್ (13) ಮೃತಪಟ್ಟಿದ್ದಾಳೆ. ಸುಮಯಾ ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಹೀಗಾಗಿ ಮೃತ ಬಾಲಕಿಯನ್ನು ಪಾಲಕರು ಚನ್ನಗಿರಿಯ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಜ್ವರ ಕಡಿಮೆಯಾಗದಿದ್ದಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅಲ್ಲಿಯೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.

ಜಿಲ್ಲೆಯಲ್ಲಿ ಒಟ್ಟು 171 ಮಕ್ಕಳು ಜ್ವರದಿಂದ ಬಳಲುತ್ತಿವೆ ಅದರಲ್ಲಿ 45 ಮಕ್ಕಳಿಗೆ ಡೆಂಗ್ಯೂ ಕಾಣಿಸಿಕೊಂಡಿದ್ದು, ಪಾಲಕರಲ್ಲಿ ಭೀತಿ ಉಂಟಾಗಿದೆ.

Edited By : Vijay Kumar
PublicNext

PublicNext

22/09/2021 12:56 pm

Cinque Terre

60.24 K

Cinque Terre

0

ಸಂಬಂಧಿತ ಸುದ್ದಿ