ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಆಕ್ಸಿಜನ್ ಸಿಗದೇ ಮಗು ಸಾವು: ರೊಚ್ಚಿಗೆದ್ದ ಪೋಷಕರು..!

ದಾವಣಗೆರೆ: ಆ್ಯಂಬುಲೆನ್ಸ್‌ನಲ್ಲಿ ಆಕ್ಸಿಜನ್ ಇಲ್ಲದ ಹಿನ್ನಲೆಯಲ್ಲಿ ನವಜಾತ ಗಂಡು ಶಿಶು ಮೃತಪಟ್ಟಿದೆ. ಹೀಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಶೃಂಗಾರ ಬಾಬು ತಾಂಡಾದ ಹಾಲೇಶ್ ನಾಯ್ಕ್, ಸ್ವಾತಿ ದಂಪತಿಯ ಮೊದಲನೇ ಮಗು ಮೃತಪಟ್ಟಿದೆ. ರಾತ್ರಿ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸವಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಕರು ದಾಖಲಿಸಿದ್ದರು. ಬೆಳಗ್ಗೆ 7 ಗಂಟೆಗೆ ಹೆರಿಗೆಯಾಗಿದ್ದು, ಉಸಿರಾಟದ ತೊಂದರೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹೊನ್ನಾಳಿಗೆ ಕರೆದೊಯ್ಯಲು ಪೋಷಕರು ಮುಂದಾಗಿದ್ದಾರೆ. ಈ ವೇಳೆ ಆ್ಯಂಬುಲೆನ್ಸ್‌ನಲ್ಲಿ ಆಕ್ಸಿಜನ್ ಇರಲಿಲ್ಲ. ಬೇರೊಂದು ಅಂಬುಲೆನ್ಸ್ ದಾರಿ ಮಧ್ಯೆ ಬರುತ್ತದೆ ಎಂದು ಆ್ಯಂಬುಲೆನ್ಸ್ ಚಾಲಕ‌ ಕರೆದೊಯ್ದಿದ್ದಾನೆ. ಹೊನ್ನಾಳಿಗೆ ಹೋಗುವುದರೊಳಗೆ ಉಸಿರಾಟದ ತೊಂದರೆಯಾಗಿ ಮಗು ಸಾವನ್ನಪ್ಪಿದೆ. ಆಸ್ಪತ್ರೆಯ ಮುಂಭಾಗ ಮಗು‌ ಮೃತದೇಹ ಇಟ್ಟು ಪೋಷಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Edited By :
PublicNext

PublicNext

10/04/2022 05:03 pm

Cinque Terre

64.85 K

Cinque Terre

1

ಸಂಬಂಧಿತ ಸುದ್ದಿ