ಚಿತ್ರದುರ್ಗ: ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ ಎದುರಾಗಿದೆ. ಲೈಂಗಿಕ ದೌರ್ಜನ್ಯ ಆರೋಪದಡಿ ಮುರುಘಾ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ಮಾಡಿದ್ದು, ಇದೀಗ ವೈದ್ಯರ ವರದಿ ಬಹಿರಂಗವಾಗಿದೆ
ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ನಿನ್ನೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯರು ನಿನ್ನೆ ಶ್ರೀಗಳ ಪುರುಷತ್ವ ವೈದ್ಯಕೀಯ ಪರೀಕ್ಷೆ ನಡೆಸಿದರು .ಪುರುಷತ್ವ ಪರೀಕ್ಷೆ ವರದಿಯನ್ನು ಇಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ಬಳಿಕ ಪುರುಷತ್ವ ಪರೀಕ್ಷೆ ವರದಿಯಲ್ಲಿ ಪಾಸಿಟಿವ್ ಬಂದಿದ್ದು ಶ್ರೀಗಳು ಫಿಟ್ ಆಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
ನಿನ್ನೆ ಮುರುಘಾ ಶ್ರೀಗಳ ರಕ್ತ, ಕೂದಲು ಮತ್ತು ಉಗುರು ಮಾದರಿಗಳನ್ನು ಸಧ್ಯ ಸಂಗ್ರಹಿಸಿ ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂಬ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
PublicNext
03/09/2022 04:47 pm