ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಅ.30ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ವೇಳೆ ಸ್ಮಶಾನಗಳು (ಖಬ್ರಿಸ್ತಾನ) ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
ಜೊತೆಗೆ ಬೀದಿ ಅಥವಾ ಗಲ್ಲಿಗಳಲ್ಲಿ (ಮೊಹಲ್ಲಾ) ಹಗಲು ಅಥವಾ ರಾತ್ರಿ ಯಾವುದೇ ಸಮಯದಲ್ಲೂ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ.
ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ ಮಾಡುವಂತಿಲ್ಲ. ಇನ್ನು ಹಬ್ಬದ ಆಚರಣೆ ವೇಳೆ ಆರು ಅಡಿಗಳ ದೈಹಿಕ ಅಂತರ ಕಾಪಾಡಬೇಕು.
ಎಲ್ಲಾ ಕಡೆಯೂ ಪ್ರವೇಶದ್ವಾರದಲ್ಲಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳಾದ ಸ್ಯಾನಿಟೈಸರ್ ಬಳಕೆ ಹಾಗೂ 10 ವರ್ಷದೊಳಗಿನ ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆಯಲ್ಲೇ ಹಬ್ಬ ಆಚರಿಸಲು ಸೂಚಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
PublicNext
19/10/2020 12:12 pm