ನವದೆಹಲಿ: ಕೊರೊನಾವೈರಸ್ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗುಣಮುಖ ಪ್ರಕರಣಗಳು ಹೆಚ್ಚಾಗುವುತ್ತಿರುವುದು ಒಂದು ಕಡೆಯಾದರೆ ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡು ಬರುತ್ತಿದೆ.
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 70,589 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಈ ಮೂಲಕ ಭಾರತದಲ್ಲಿ ವರದಿಯಾದ ಒಟ್ಟಾರೆ ಈ ಮೂಲಕ ಸೋಂಕಿತರ ಸಂಖ್ಯೆ 61 ಲಕ್ಷ ಗಡಿ ದಾಟಿದೆ. ಇದ್ರಲ್ಲಿ ಸದ್ಯ 8,97,394 ಜನರು ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟಾರೆ 33,98,845 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇದೀಗ ದೇಶದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ದೇಶದಲ್ಲಿ 776 ಜನರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಹೀಗಾಗಿ ಕಳೆದ ಒಂದು ದಿನಕ್ಕೆ ಹೋಲಿಸಿದರೆ ಸಾವಿನ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 96,318ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
9,47,576 ಸಕ್ರಿಯ ಪ್ರಕರಣಗಳಿದ್ದು, 51,01,398 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 11,42,811 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈ ವರೆಗೆ ದೇಶದಲ್ಲಿ 7,31,10,041 ಜನರಿಗೆ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ, ದೇಶದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಎಂಆರ್ ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸಿದೆ.
PublicNext
29/09/2020 10:09 am