ಬೆಳಗಾವಿ: ವಿದ್ಯಾಗಮದಡಿ ಪಾಠ ಕಲಿಯುತ್ತಿದ್ದ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರ ಗ್ರಾಮದ 30 ವಿದ್ಯಾರ್ಥಿಗಳಿಗೆ ಹಾಗೂ 6 ಜನ ಗ್ರಾಮಸ್ಥರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆ ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಇತ್ತೀಚೆಗೆ ಅಲ್ಲಿ ರ‍್ಯಾಪಿಡ್ ಟೆಸ್ಟ್ ನಡೆಸಿದ್ದರು. ಈ ವೇಳೆ, ಗ್ರಾಮದ 6 ಮಂದಿ ಹಾಗೂ ಶಾಲೆಯ 30 ಮಕ್ಕಳಿಗೆ ಕೋವಿಡ್–19 ದೃಢಪಟ್ಟಿದೆ. ಈ ಮಕ್ಕಳು 2, 3 ಹಾಗೂ 4ನೇ ತರಗತಿಯವರಾಗಿದ್ದಾರೆ.
ಈ ಶಾಲೆಯಲ್ಲಿ 195 ವಿದ್ಯಾರ್ಥಿಗಳಿದ್ದು, 10ರಿಂದ 12 ಮಕ್ಕಳ ತಂಡ ರಚಿಸಿಕೊಂಡು ಶಿಕ್ಷಕರು ಅಲ್ಲಿನ ಸಾರ್ವಜನಿಕ ಸ್ಥಳಗಳು, ದೇವಸ್ಥಾನ ಮೊದಲಾದ ಆರು ಕಡೆಗಳಲ್ಲಿ ವಿದ್ಯಾಗಮ ಯೋಜನೆಯಡಿ ಶಿಕ್ಷಣ ನೀಡುತ್ತಿದ್ದರು. ಅ. 4 ಹಾಗೂ ಅ. 5ರಂದು ಒಟ್ಟು 130 ಜನರಿಗೆ ರ‍್ಯಾಪಿಡ್ ಟೆಸ್ಟ್ ಮಾಡಲಾಗಿತ್ತು. ಈ ವೇಳೆಯಲ್ಲಿ ಒಟ್ಟು 30 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ. ಎಲ್ಲ ಮಕ್ಕಳಿಗೆ ಯಾವುದೇ ರೋಗದ ಗುಣಲಕ್ಷಣಗಳು ಇರದ ಹಿನ್ನೆಲೆಯಲ್ಲಿ ಹೋಮ್ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
PublicNext
10/10/2020 10:47 am