ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಶೇ.1ಕ್ಕಿಂತ ಕಡಿಮೆ ಇವೆ. ಈ ಹಿನ್ನೆಲೆಯಲ್ಲಿ ಸರಕಾರ ಒಂದೊಂದೇ ವಿನಾಯಿತಿ ನೀಡುತ್ತಿದೆ. ಇದೀಗ ಎಲ್ ಕೆಜಿ, ಯುಕೆಜಿ ಹಾಗೂ ಅಂಗನವಾಡಿ ತರಗತಿ ಇಂದಿನಿಂದ ಆರಂಭಗೊಂಡಿದೆ.
ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಚಿವರು ಮತ್ತು ಇಲಾಖೆಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು.
ಆ ಹಿನ್ನೆಲೆಯಲ್ಲಿ ಎಲ್ ಕೆಜಿ, ಯುಕೆಜಿ, ಅಂಗನವಾಡಿ ಆರಂಭವಾಗಿದ್ದು, ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ ಮಾಡಲಾಗಿದೆ. ಈ ಮಕ್ಕಳಿಗೆ ಅರ್ಧ ದಿನ ಮಾತ್ರ ತರಗತಿ ನಡೆಯಲಿದ್ದು, ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸೋಮವಾರ ದಿಂದ ಶುಕ್ರವಾರದ ವರೆಗೆ ಮಾತ್ರ ತರಗತಿ ನಡೆಯಲಿದ್ದು , ಬೆಳಗ್ಗೆ 9.30ರಿಂದ 3.30ರ ತನಕ ವೇಳಾಪಟ್ಟಿ ಪ್ರಕಟಿಸಲಾಗಿದೆ.
PublicNext
08/11/2021 01:29 pm