ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೂಪಾಂತರ ಕೋವಿಡ್ ತಲ್ಲಣ : ಸಂಜೆ ಸಿಎಂ ತುರ್ತು ಸಭೆ

ಬೆಂಗಳೂರು: ಹೆಮ್ಮಾರಿ ಸೋಂಕು ಮತ್ತೆ ತನ್ನ ಆರ್ಭಟ ಮುಂದುವರೆಸಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ.

ಅದರಲ್ಲೂ ಕೋವಿಡ್ ನಿಯಂತ್ರಣ, ಲಸಿಕೆ ವಿಚಾರ ಹಾಗೂ ಹೊಸ ತಳಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಸಂಜೆ ಸಭೆ ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್ ನ ಹೊಸ ರೂಪಾಂತರಿ ತಳಿಗೆ ‘ಒಮಿಕ್ರಾನ್ ಅಥವಾ ಬಿ.1.1.529’ ಹೆಸರಿಟ್ಟಿರುವ ವಿಶ್ವ ಆರೋಗ್ಯ ಸಂಸ್ಥೆ, ಈ ರೂಪಾಂತರಿ ತಳಿ ಕಳವಳಕಾರಿ ಎಂದು ಘೋಷಿಸಿದೆ.

ಇಂದು ಸಂಜೆ 4 ಕ್ಕೆ ನಿವಾಸದಲ್ಲಿ ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಲಿದ್ದಾರೆ. ಜೊತೆಗೆ ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಡಿಸಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲು ಸೂಚನೆ ನೀಡಿದ್ದಾರೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಕೂಡಾ ಸಭೆಗೆ ಆಹ್ವಾನಿಸಿದ್ದಾರೆ.

Edited By : Nirmala Aralikatti
PublicNext

PublicNext

27/11/2021 02:05 pm

Cinque Terre

55.95 K

Cinque Terre

13