ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಉಲ್ಬಣ: ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸುವಂತಿಲ್ಲ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಏಕಾಏಕಿ ಏರಿಕೆಯಾಗಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಭೆ-ಸಮಾರಂಭ, ಹಾಗೂ ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳನ್ನು ಮುಂದೂಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ ಅನಿಲ್ ಕುಮಾರ್ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ. ವೈದ್ಯಕೀಯ ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋವಿಡ್ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಯಾವುದೇ ವಿದ್ಯಾರ್ಥಿಗೆ ಸೋಂಕು ಖಚಿತವಾದಲ್ಲಿ ನಿಯಮಾನುಸಾರ ಚಿಕಿತ್ಸೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Edited By : Nagaraj Tulugeri
PublicNext

PublicNext

28/11/2021 09:09 pm

Cinque Terre

85.5 K

Cinque Terre

7