ಶಿವಮೊಗ್ಗ: ನಗರದ ಖಾಸಗಿ ನರ್ಸಿಂಗ್ ಕಾಲೇಜಿಗೆ ಕೇರಳದಿಂದ ಬಂದ 23 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಹಾಸ್ಟೆಲ್ನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಕೇರಳದಿಂದ ನರ್ಸಿಂಗ್ ಕಾಲೇಜಿಗೆ ವಿದ್ಯಾರ್ಥಿಗಳು ಬಂದಿದ್ದರು. ಅವರಿಗೆ ಕೊರೊನಾ ಲಕ್ಷಣ ಕಂಡು ಬಂದಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸದ್ಯ ಸಿಕ್ಕ ವರದಿಯಲ್ಲಿ 23 ವಿದ್ಯಾರ್ಥಿಗಳ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಡಿಸಿ ತಿಳಿಸಿದ್ದಾರೆ.
ಇನ್ನು ಕೊರೊನಾ ಮೂರನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತವು ಸಿದ್ಧತೆ ನಡೆಸಿದೆ. ಜಿಲ್ಲೆಯಲ್ಲಿ 1,050 ಆಕ್ಸಿಜನ್ ಬೆಡ್ ವ್ಯವಸ್ಥೆ ಇದೆ. 33 ಕೆಎಲ್ ಆಕ್ಸಿಜನ್ ಟ್ಯಾಂಕ್ ಲೈಸೆನ್ಸ್ ಪ್ರಕ್ರಿಯೆ ನಡೆಯುತ್ತಿದೆ. ಹಿಂದಿನ ಎರಡು ಅಲೆ ಸಂದರ್ಭದಲ್ಲಿ ಕೆಲಸ ಮಾಡಿದ ವೈದ್ಯರು, ನರ್ಸ್ಗಳು ಇದ್ದಾರೆ. ತಾಲೂಕುಗಳಲ್ಲೂ ಸಹ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
PublicNext
02/12/2021 04:22 pm