ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯ ನಿರ್ಮಲ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಿನ್ನೆ (ಗುರುವಾರ) ಆಸ್ಪತ್ರೆ ಹಾಗೂ ಕಾಲೇಜು ಆವರಣವನ್ನು ಸೀಲ್‌ಡೌನ್ ಮಾಡಲಾಗಿದೆ.
ಶಿವಮೊಗ್ಗದ ಆಸ್ಪತ್ರೆಯಲ್ಲಿ ನರ್ಸಿಂಗ್ ಪರೀಕ್ಷೆ ನಡೆಯುತ್ತಿದ್ದು, ನವೆಂಬರ್ 30ರಿಂದ ಡಿ.7ರವರೆಗೆ ನಿರ್ಮಲ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ 176 ವಿದ್ಯಾರ್ಥಿಗಳು ಪರೀಕ್ಷೆ ಬರೆದು ಬಂದಿದ್ದರು. ಮಂಗಳವಾರ ಸಂಜೆ ಈ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿದಾಗ ಅವರಲ್ಲಿ 24 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
PublicNext
10/12/2021 07:42 am