ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನ ಶಾಲೆಗಳಲ್ಲಿ ಮತ್ತೆ ಕೊರೊನಾ ಅಬ್ಬರ: 31 ವಿದ್ಯಾರ್ಥಿಗಳಿಗೆ ಅಂಟಿದ ಸೋಂಕು

ಬೆಂಗಳೂರು : ಬೆಂಗಳೂರಿನ ಶಾಲೆಗಳಲ್ಲಿ ಮತ್ತೆ ಕೊರೊನಾ ಅಬ್ಬರ ಶುರುವಾಗಿದ್ದು, ದಾಸರಹಳ್ಲಿ ವಲಯದ ಎರಡು ಶಾಲೆಗಳಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸೋಮವಾರ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 6 ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜೂನ್ 9 ರಂದು ರಾಜಗೋಪಾಲ ನಗರದ ಖಾಸಗಿ ಶಾಲೆಯ 4 ಮತ್ತು 5 ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು ಪತ್ತೆಯಾದ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಆದರೆ ಶಾಲೆಗಳ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಹಾಯಕ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

Edited By : Nagaraj Tulugeri
PublicNext

PublicNext

14/06/2022 11:14 am

Cinque Terre

36.13 K

Cinque Terre

1

ಸಂಬಂಧಿತ ಸುದ್ದಿ