ಮೈಸೂರು : ಇಂದು ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದೆ. ಅದೇ ರೀತಿ ಮೈಸೂರಿನಲ್ಲಿ ಪರೀಕ್ಷೆ ಬರಿಯಲೆಂದು ಹೋದ ಅನುಶ್ರೀ ಎನ್ನುವ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
ಹೌದು ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ಮಾದಪುರ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವಾಗ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಅನುಶ್ರಿ ಕೊನೆಯುಸಿರೆಳೆದಿದ್ದಾಳೆ.
PublicNext
28/03/2022 01:19 pm