ನವದೆಹಲಿ: ಹೆಮ್ಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಮಧ್ಯೆ ಭಾರತೀಯರಿಗೆ ಖುಷಿ ಸುದ್ದಿಯನ್ನು ಕೇಂದ್ರ ಸರ್ಕಾರ ನೀಡಿದೆ.
ಇದೀಗ ಅತೀ ಹೆಚ್ಚು ಕೋವಿಡ್-19 ಸೋಂಕಿತರ ಗುಣಮುಖ ರಾಷ್ಟ್ರಗಳ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ. ಈ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹಂಚಿಕೊಂಡಿದ್ದಾರೆ.
ಕಳೆದ 3 ದಿನಗಳಲ್ಲಿ ಭಾರತದ ಗುಣಮುಖರ ಸಂಖ್ಯೆ ಶೇಕಡಾ 80 ಆಗಿದೆ. ಒಂದೇ ದಿನದಲ್ಲಿ 90 ಸಾವಿರ ಕೊರೊನಾ ಸೋಂಕಿತರ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ದಾಖಲೆ ಬರೆದಿದೆ. ಕಳೆದ 24 ಗಂಟೆಯಲ್ಲಿ 1,01,468 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಒಟ್ಟು 6,027,580 ಮಂದಿಗೆ ಕೊರೊನಾ ದೃಢಪಟ್ಟಿದೆ. ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 87,882ಕ್ಕೆ ಏರಿಕೆಯಾಗಿದೆ.
ಕೋವಿಡ್-19 ವೈರಸ್ ಸೋಂಕಿತರಲ್ಲಿ ಭಾರತ ಇದೀಗ 2ನೇ ಸ್ಥಾನ ಪಡೆದಿದೆ.
PublicNext
22/09/2020 06:40 pm