ನವದೆಹಲಿ: ಸದ್ಯ ಜಾರಿಯಲ್ಲಿರುವ ಅನ್‌ಲಾಕ್ 5.0 ಅನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದ್ದು, ಯಾವುದೇ ಹೊಸ ಮಾರ್ಗಸೂಚಿಯನ್ನು ಹೊರಡಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ಸಂಬಂಧ ಜಾರಿಗೊಳಿಸಿದ ನಿರ್ಬಂಧಗಳನ್ನು ಈಗಾಗಲೇ ಸಾಕಷ್ಟು ಸಡಿಲಗೊಳಿಸಲಾಗಿದೆ. ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಿಲ್ಲ. ದೇಶಾದ್ಯಂತ ಕಂಟೈನ್ಮೆಂಟ್ ಝೋನ್‌ಗಳಲ್ಲಿ ಲಾಕ್‌ಡೌನ್ ನವೆಂಬರ್ 30ರ ತನಕ ಮುಂದುವರಿಯಲಿದೆ. ಉಳಿದ ಪ್ರದೇಶಗಳಲ್ಲಿ ಅನ್‌ಲಾಕ್ 5.0 ಮಾರ್ಗಸೂಚಿಯಲ್ಲಿ ಪ್ರಕಟಿಸಿದ ನಿಯಮಗಳು ಜಾರಿಯಲ್ಲಿರುತ್ತವೆ' ಎಂದು ಮಾಹಿತಿ ನೀಡಿದೆ.
PublicNext
27/10/2020 06:11 pm