ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ವೈದ್ಯರು ನೀಡುತ್ತಿರುವ ಸೇವೆ ಪರಿಗಣಿಸಿ, ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಪೋತ್ಸಾಹಿಸುವ ನಿಟ್ಟಿನಲ್ಲಿ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆ.1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.
ಈ ಮೂಲಕ ವೈದ್ಯರಿಗೆ ಸರ್ಕಾರ ಹೊಸ ವರ್ಷದ ಉಡುಗೊರೆ ನೀಡಿದೆ.
ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಎಚ್ ಎಸ್) ಮಾದರಿಯಲ್ಲಿ ರಾಜ್ಯ ಸರ್ಕಾರವು ವೈದ್ಯರ ವಿಶೇಷ ಭತ್ಯೆಯನ್ನು ಸೆಪ್ಟೆಂಬರ್ 1ರಿಂದಲೇ ಪೂರ್ವಾನ್ವಯವಾಗುವಂತೆ ಪರಿಷ್ಕರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
25 ವರ್ಷಕ್ಕಿಂತ ಅಧಿಕ ಅವಧಿ ಸೇವೆ ಸಲ್ಲಿಸಿದ ಸೂಪರ್ ಸ್ಪೆಷಾಲಿಟಿ ವೈದ್ಯರ ತಿಂಗಳ ಭತ್ಯೆಯನ್ನು ₹ 58 ಸಾವಿರದಿಂದ ₹ 1.03 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ವೈದ್ಯ ಸಮೂಹದ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ.
ಈ ಹಿಂದೆ 13 ವರ್ಷ ಮೇಲ್ಪಟ್ಟು ಸೇವಾ ಅನುಭವ ಹೊಂದಿರುವವರಿಗೆ ಒಂದೇ ಮಾದರಿಯ ಭತ್ಯೆಯನ್ನು ನೀಡಲಾಗುತ್ತಿತ್ತು.
PublicNext
23/12/2020 08:55 am