ಬೆಂಗಳೂರು : ಕೊರೊನಾ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶವೊಂದನ್ನಾ ಜಾರಿಗೊಳಿಸಿದೆ.
ಇನ್ನು ಮುಂದೆ ಕೊರೊನಾ ರೋಗ ಲಕ್ಷಣಗಳಾದ ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ ಮತ್ತು ಉಸಿರಾಟದ ಸಮಸ್ಯೆಗಳಿರುವ ವ್ಯಕ್ತಿಗಳು ಮಾರುಕಟ್ಟೆ, ಅಂಗಡಿ, ಮಳಿಗೆಗಳಿಗೆ ಭೇಟಿ ನೀಡುವುದಕ್ಕೆ ಬ್ರೇಕ್ ಹಾಕಿದೆ.
ಮಾರುಕಟ್ಟೆ ಮತ್ತು ಅಂಗಡಿ ಮಳಿಗೆಗಳ ನಿರ್ವಹಣೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಗರಿಷ್ಠ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ರೋಗ ಲಕ್ಷಣ ರಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಂಗಡಿ ಮಳಿಗೆಗಳ ಪ್ರವೇಶ ದ್ವಾರದಲ್ಲೇ ಎಲ್ಲ ಉದ್ಯೋಗಿಗಳು ಮತ್ತು ಗ್ರಾಹಕರಿಗೆ ಥರ್ಮಲ್ ಸ್ಕ್ಯಾನ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
ಆನ್ ಲೈನ್ ವ್ಯವಹಾರಕ್ಕೆ ಉತ್ತೇಜನ ನೀಡಬೇಕು. ಪಾಳಿಯಂತೆ ಅಂಗಡಿ ಮುಂಗಟ್ಟು ತೆರೆಯುವುದು ಮತ್ತು ಅಂಗಡಿಗಳು ತೆರೆಯುವ ಅವಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಲೋಚಿಸಬೇಕು.
ಅನಧಿಕೃತ ಪಾರ್ಕಿಂಗ್ ಗೆ ಅವಕಾಶ ನೀಡಬಾರದು. ಜನ ಸಂದಣಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
PublicNext
23/12/2020 10:08 am