ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಂದೇ ದಿನದಲ್ಲಿ ನೈಟ್ ಕರ್ಫ್ಯೂ ಪ್ಲಾನ್ ಠುಸ್

ಬೆಂಗಳೂರು: ಡೆಡ್ಲಿ ಸೋಂಕು ಕೊರೊನಾದಿಂದ ಕಂಗಾಲಾದ ಜನಕ್ಕೆ ಮತ್ತೆ ರೂಪಾಂತರ ಕೊರೊನಾ ಸೋಂಕು ನೆಮ್ಮದಿ ಕಸಿದಿದೆ.

ಬ್ರಿಟನ್ ಭೂತಕ್ಕೆ ಬೆದರಿದ ಭಾರತದಲ್ಲಿ ಮುಖ್ಯವಾಗಿ ಕರ್ನಾಟಕದಲ್ಲಿ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಇಂದಿನಿಂದ ಜನವರಿ 2 ರ ತನಕ ನೈಟ್ ಕರ್ಫ್ಯೂ ಜಾರಿ ಮಾಡಿ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದರು.

ಸದ್ಯ ತನ್ನ ತೀರ್ಮಾನದಿಂದ ಸರ್ಕಾರ ಹಿಂದೆ ಸರಿದಿದೆ ರಾಜ್ಯ ಸರ್ಕಾರ, ನೈಟ್ ಕರ್ಫ್ಯೂ ಇರಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ - ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂ ವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂ ವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

24/12/2020 06:14 pm

Cinque Terre

114.44 K

Cinque Terre

7

ಸಂಬಂಧಿತ ಸುದ್ದಿ