ಬೆಂಗಳೂರು : ಕೊರೊನಾ ಎರಡನೇ ಅಲೆಗೆ ಹೋಲಿಸಿದರೆ ಸದ್ಯ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದೆ. ಮೂರನೆ ಅಲೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್ಗಳ ಹೆಚ್ಚಳ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.
ಕೊರೊನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಮೇಲ್ವಿಚಾರಣೆಯಾಗಲಿದೆ. ಕಂಟೈನ್ಮೆಂಟ್ ಐಸೊಲೇಷನ್ ಮೇಲೆ ನಿಗಾ ಇಡಬೇಕಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆ ಇತ್ತು. ಗಡಿ ಪ್ರದೇಶದ ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಆ ಭಾಗದಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ರಾಜ್ಯ ಪ್ರವೇಶಿಸುವವರು ಆರ್ಟಿಪಿಸಿಆರ್ ನೆಗೆಟಿವ್ ಇರಬೇಕು. ಒಂದು ವ್ಯಾಕ್ಸಿನ್ ಡೋಸ್ ಆಗಿರಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದರು.
PublicNext
31/07/2021 08:19 am