ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 15ರ ಬಳಿಕ ಬೆಂಗಳೂರಿನಲ್ಲೂ ಟಫ್ ರೂಲ್ಸ್ ಜಾರಿ ಮಾಡುವ ಬಗ್ಗೆ ಚಿಂತನೆಗಳು ನಡೆದಿವೆ. ಈ ಬಗ್ಗೆ ಈಗಾಗಲೇ ಕಂದಾಯ ಸಚಿವ ಆರ್ ಅಶೋಕ್ ಸುಳಿವು ಸಹ ಕೊಟ್ಟಿದ್ದಾರೆ.
ಈಗಾಗಲೇ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೂ ಸಹ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿದೆ. ಅದರಲ್ಲೂ ಮಕ್ಕಳ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಹೀಗಾಗಿ ಕಠಿಣ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
PublicNext
13/08/2021 11:12 am