ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ವಾರದ ಬಳಿಕ ಶಾಲೆ ಆರಂಭ, ವೀಕೆಂಡ್ ಕರ್ಫ್ಯೂ ಮುಂದುವರಿಕೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಿರುವ ಎಂಟು ಜಿಲ್ಲೆಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ ಎಂದು ಆದೇಶ ಹೊರಡಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ, ಕಲಬುರ್ಗಿ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ.

ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಈಗಾಗಲೇ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿತ್ತು ಅದೇ ನಿಯಮಗಳನ್ನು ಮುಂದಿನ ದಿನಗಳಿಗೂ ಮುಂದುವರೆಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ.

ಇದೇ ವೇಳೆ ಶಾಲೆ ಆರಂಭಿಸುವ ಬಗ್ಗೆ ಚರ್ಚೆ ನಡೆಸಿದ ಅವರು ಸದ್ಯಕ್ಕೆ ಗಡಿ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯುವುದಿಲ್ಲ. ಪಾಸಿಟಿವಿಟಿ ಶೇಕಡ 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುವುದು, ಪೋಷಕರು, ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ಹಾಕಬೇಕು, ಶಾಲೆ ಆರಂಭವಾದ ನಂತರ ಶೇಕಡ 2 ರಷ್ಟು ಪಾಸಿಟಿವಿಟಿ ದರ ಜಾಸ್ತಿ ಆದರೆ, ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾವಾರು ಕೋವಿಡ್ ಮ್ಯಾನೇಜ್ ಮೆಂಟ್ ಪ್ಲಾನ್ ಮಾಡಲಾಗುವುದು ಎಂದರು.

Edited By : Nirmala Aralikatti
PublicNext

PublicNext

14/08/2021 06:34 pm

Cinque Terre

67.05 K

Cinque Terre

3

ಸಂಬಂಧಿತ ಸುದ್ದಿ