ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ತಜ್ಞರ ಅಭಿಪ್ರಾಯ ನೋಡಿ ಗಣೇಶೋತ್ಸವ ಆಚರಣೆಗೆ ಅವಕಾಶ:ಸಚಿವ ಸುನೀಲ್ ಕುಮಾರ್

ಉಡುಪಿ: ತಜ್ಞರ ಅಭಿಪ್ರಾಯ ನೋಡಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುತ್ತೇವೆ ಎಂದು ಇಂಧನ ,ಕನ್ನಡ ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು,ಗಣೇಶೋತ್ಸವ ಆಚರಣೆ ಬಗ್ಗೆ ಜನರ ಬೇಡಿಕೆ ಇದೆ.ಜನರ ಬೇಡಿಕೆ ಸರಿಯಾಗಿದೆ.ಆದರೆ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯ.ಅದೇ ರೀತಿ ಕೇಂದ್ರ ಸರ್ಕಾರದ ಸೂಚನೆಯನ್ನೂ ನೋಡಬೇಕು. ತಜ್ಞರು ಹೇಳಿರುವ ವಿಚಾರಗಳನ್ನು ಗಮನಿಸಬೇಕು.ತಜ್ಞರ ಅಭಿಪ್ರಾಯ ನೋಡಿ ಆಚರಣೆಗೆ ಅವಕಾಶ ನೀಡುತ್ತೇವೆ.ಇದನ್ನು ಅರ್ಥ ಮಾಡಿಕೊಂಡು ಜನರು ಸಹಕರಿಸಬೇಕು ಎಂದು ಹೇಳಿದ್ದಾರೆ.

Edited By : Manjunath H D
PublicNext

PublicNext

30/08/2021 01:26 pm

Cinque Terre

84.17 K

Cinque Terre

7

ಸಂಬಂಧಿತ ಸುದ್ದಿ