ನವದೆಹಲಿ: ದೇಶದಲ್ಲಿ ಇಂದು ಕೇವಲ 8 ಗಂಟೆಯಲ್ಲಿ 1.5 ಕೋಟಿ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಮಾಹಿತಿ ನೀಡಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 71 ಜನ್ಮ ದಿನಾಚರಣೆ ಸಂದರ್ಭದಲ್ಲಿ 2 ಕೋಟಿ ಲಸಿಕೆ ನೀಡುವ ಗುರಿಯೊಂದಿಗೆ ದೇಶಾದ್ಯಂತ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಪತ್ತೆಗಾಗಿ ಟಿಕ್ಕರ್ ಒಂದನ್ನು ಸರ್ಕಾರ ಸೇರ್ಪಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಬಿಜೆಪಿ ವತಿಯಿಂದ 20 ದಿನಗಳ ಮೆಗಾ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದು ಅಕ್ಟೋಬರ್ 7ರವರೆಗೆ ಮುಂದುವರೆಯಲಿದೆ. ಸೇವಾ ಮತ್ತು ಸಮರ್ಪಣಾ ಅಭಿಯಾನವಾಗಿ ಮೋದಿ ಜನ್ಮ ದಿನದಂದು ದೇಶಾದ್ಯಂತ ಕೋವಿಡ್-19 ಲಸಿಕಾ ಅಭಿಯಾನ ನಡೆಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿದೆ.
PublicNext
17/09/2021 04:57 pm