ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 71 ಜನ್ಮ ದಿನಾಚರಣೆ ಸಂದರ್ಭದಲ್ಲಿ 2 ಕೋಟಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ರಾಜ್ಯದಲ್ಲಿಯೂ ಕೊರೊನಾ ಲಸಿಕೆ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, "ಕೊರೊನಾ ಲಸಿಕೆ ವಿತರಣೆಯಲ್ಲಿ ಕರ್ನಾಟಕ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಈವರೆಗೂ 5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಲಾಗಿದೆ. ಕಳೆದ 7 ತಿಂಗಳಿಂದ ನಿರಂತರವಾಗಿ ಶ್ರಮಿಸುತ್ತಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದಗಳು. ಜೊತೆಗೆ ಸೂಕ್ತ ಮಾರ್ಗದರ್ಶನ ಮತ್ತು ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು" ಎಂದು ಬರೆದುಕೊಂಡಿದ್ದಾರೆ.
PublicNext
17/09/2021 05:31 pm