ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಓಮಿಕ್ರಾನ್ ಎಂಬ ಕೊರೊನಾ ರೂಪಾಂತರಿ ವೈರಸ್ನಿಂದಾಗಿ ಭಾರತದಲ್ಲಿ ಮತ್ತೆ ಕೋವಿಡ್ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಪ್ರಯಾಣದ ನಿರ್ಬಂಧಗಳನ್ನು ಮುಕ್ತಗೊಳಿಸುವ ಬಗ್ಗೆ ಮರು ಪರಿಶೀಲನೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಇಂದು ನಿರ್ದೇಶನ ನೀಡಿದ್ದಾರೆ.
ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ನರೇಂದ್ರ ಮೋದಿ ದೇಶದ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಪರೀಕ್ಷೆ ಮಾಡಬೇಕು. ಹಾಗೇ ಈ ಕುರಿತ ಹೊರಡಿಸಲಾಗಿರುವ ಮಾರ್ಗಸೂಚಿಗಳ ಅಗತ್ಯವನ್ನು ಮರು ಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.
ಈ ವೇಳೆ ಇತ್ತೀಚೆಗೆ ದಕ್ಷಿಣ ಆಫ್ರಿಕಾ, ಬೊಟ್ಸ್ವಾನಾ, ಹಾಂಕಾಂಗ್, ಇಸ್ರೇಲ್ ಹೀಗೆ ನಾಲ್ಕೈದು ದೇಶಗಳಲ್ಲಿ B.1.1.529 ಓಮಿಕ್ರಾನ್(Omicron) ಎಂಬ ರೂಪಾಂತರಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಭಾರತದ ಮೇಲೆ ಇವುಗಳ ಪರಿಣಾಮವನ್ನೂ ಚರ್ಚೆ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.
PublicNext
27/11/2021 10:04 pm