ಮೈಸೂರು: ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದೆ.
ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡುತ್ತಿದ್ದು, ನಕಲಿ ಆರ್.ಟಿ.ಪಿ.ಸಿ.ಆರ್ ಮೂಲಕ ಜನರು ಬರುವ ಆತಂಕ ಹಿನ್ನೆಲೆಯಲ್ಲಿ ಗಡಿಯಲ್ಲಿ ಮೊಬೈಲ್ ಆ್ಯಫ್ ಮೂಲಕ ಆರ್.ಟಿ.ಪಿ.ಸಿ.ಆರ್ ವರದಿ ಸ್ಕ್ಯಾನ್ ಮಾಡಲಾಗುತ್ತಿದೆ.
ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ಪರೀಕ್ಷೆ ನಡೆಸಿ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ತೋರಿಸಿದರೆ ಅದನ್ನ ಸ್ಕ್ಯಾನ್ ಮೂಲಕ ಪರೀಕ್ಷಿಸಲಾಗುತ್ತಿದೆ.
ಕೇರಳದಿಂದ ಬರುವ ಪ್ರತಿಯೊಬ್ಬರ ಪರೀಕ್ಷೆಯನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಈ ಹಿಂದೆ ನಕಲಿ ವರದಿ ತಂದು ರಾಜ್ಯಕ್ಕೆ ಪ್ರಯಾಣಿಕರು ಬರುತ್ತಿದ್ದರು.ಇದನೆಲ್ಲಾ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.
PublicNext
03/12/2021 11:42 am