ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಬಿಎಂಪಿ ಹೊಸ ರೂಲ್ಸ್: ಎಲ್ಲರೂ ಎರಡು ಡೋಸ್ ಲಸಿಕೆ ಪಡೆಯಬೇಕಾದ್ದು ಕಡ್ಡಾಯ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಈಗ ಎಲ್ಲರಿಗೂ ಓಮಿಕ್ರಾನ್ ಭೀತಿ. ಹೀಗಾಗಿ ಈ ಮಾರಣಾಂತಿಕ ವೈರಸ್‌ಅನ್ನು ಕಟ್ಟಿ ಹಾಕಲು ಬಿಬಿಎಂಪಿ ಕೆಲವು ಕಠಿಣ ನಿಮಯಗಳನ್ನು ಜಾರಿ ಮಾಡಿದೆ. ಮಾಲ್, ಚಿತ್ರಮಮಂದಿರ, ಮಾರುಕಟ್ಟೆ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡಲು ಎರಡು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯಗೊಳಿಸಿದೆ. ಆಯಾ ಸ್ಥಳಗಳಿಗೆ ಸಂಬಂಧಿಸಿದ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಕೊರೊನಾ ಮಾರ್ಗಸೂಚಿ ಪಾಲನೆ ಆಗಿರುವ ಖಚಿತ ಪಡಿಸಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಈಗಾಗಲೇ ನಿರ್ದೇಶನಗಳು ಹಾಗೂ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲಾಗಿದೆ. ನಿಯಮಗಳ ಪಾಲನೆ ಮಾಡುತ್ತಿರುವುದನ್ನು ಪ್ರತಿನಿತ್ಯ ಪರಿಶೀಲನೆ ಮಾಡಲು ಸಾಧ್ಯವಾಗದಿದ್ದರೂ, ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮಗಳ ಕೈಗೊಳ್ಳಲಾಗುತ್ತದೆ. ಇದೀಗ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ಜನರು 2ನೇ ಡೋಸ್ ಲಸಿಕೆ ಪಡೆದುಕೊಳ್ಳಲು ಮುಂಬರುತ್ತಿದ್ದಾರೆ. ಮೊಬೈಲ್ ವ್ಯಾಕ್ಸಿನ್ ಕ್ಯಾಂಪ್ ಗಳನ್ನೂ ಕೂಡ ನಡೆಸಲಾಗುತ್ತಿದೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

05/12/2021 03:58 pm

Cinque Terre

32.31 K

Cinque Terre

0

ಸಂಬಂಧಿತ ಸುದ್ದಿ