ಬೆಂಗಳೂರು: ದೇಶದಲ್ಲಿ ಈವರೆಗೆ ಒಟ್ಟು 32 ಮಂದಿಗೆ ಒಮಿಕ್ರಾನ್ ವಕ್ಕರಿಸಿದೆ. ಈ ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರವು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಸದ್ಯ ಒಮಿಕ್ರಾನ್ ಸೋಂಕಿತರ ಡಿಸ್ಚಾರ್ಜ್ ಬಗ್ಗೆ ಕರ್ನಾಟಕ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ.
ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ ಅಂದರೆ 10 ದಿನಕ್ಕೆ ಡಿಸ್ಜಾರ್ಜ್ ಮಾಡಬಹುದು. ಡಿಸ್ಜಾರ್ಜ್ ಆಗುವ ಮುನ್ನ ಮೂರು ದಿನದಲ್ಲಿ ಯಾವುದೇ ರೀತಿಯ ಜ್ವರ ಅಥವಾ ಯಾವುದೇ ರೋಗ ಲಕ್ಷಣ ಇರಬಾರದು. ಯಾವುದೇ ಆಕ್ಸಿಜನ್ ಸಪೋರ್ಟ್ ಇಲ್ಲದೇ 4 ದಿನಗಳ ಕಾಲ 95% ಆಕ್ಸಿಜನ್ ಲೆವೆಲ್ ಇದ್ದರೆ ಡಿಸ್ಜಾರ್ಜ್ ಮಾಡಬಹುದು.
ಡಿಸ್ಚಾರ್ಜ್ ಗೂ ಮುನ್ನ ಎರಡು ಬಾರಿ ಆರ್ ಟಿಪಿಸಿಆರ್ ಟೆಸ್ಟ್ ಮಾಡಿ ನೆಗೆಟಿವ್ ಇದ್ರೆ ಮಾತ್ರ ಡಿಸ್ಚಾರ್ಜ್ ಮಾಡಬೇಕು. ಒಂದು ವೇಳೆ ಆರ್ ಟಿಪಿಸಿಆರ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದರೆ 48 ಗಂಟೆಗಳ ಬಳಿಕ ಮತ್ತೆ ಸ್ವಾಬ್ ಕಲೆಕ್ಟ್ ಮಾಡಿ ಆರ್ ಟಿಪಿಸಿಆರ್ ಟೆಸ್ಟ್ ಮಾಡಬೇಕು.
ಡಿಸ್ಚಾರ್ಜ್ ಆದ ವ್ಯಕ್ತಿಗೆ ಹೋಂ ಕ್ವಾರಂಟೈನ್ ಅಥವಾ ಸೆಲ್ಫ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ ನೀಡಬೇಕು. ಹೋಂ ಕ್ವಾರಂಟೈನ್ ನಲ್ಲಿ ಇರುವ ವ್ಯಕ್ತಿಗೆ ಮತ್ತೆ 6ನೇ ದಿನಕ್ಕೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಬೇಕು.
PublicNext
11/12/2021 08:29 am