ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 3ಕ್ಕೆ ಏರಿಕೆ :ಸಚಿವ ಸುಧಾಕರ್

ಬೆಂಗಳೂರು: ಕೊವೀಡ್ ರೂಪಾಂತರಿ ತಳಿ ಒಮಿಕ್ರಾನ್ ವೈರಸ್‌ನ ಮತ್ತೊಂದು ಪ್ರಕರಣ ರಾಜ್ಯದಲ್ಲಿ ಪತ್ತೆ ಆಗಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ 34 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿದ್ದು, ದೃಢಪಟ್ಟಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ 5 ಮಂದಿ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 15 ಮಂದಿ ಪತ್ತೆ ಮಾಡಲಾಗಿದೆ.

ಡಿ.೧ ರಂದು ಭಾರತಕ್ಕೆ ಬಂದಿದ್ದ ವ್ಯಕ್ತಿಗೆ ಕೊವೀಡ್ ಟೆಸ್ಟ್ ಒಳಪಡಿಸಿದಾಗ ಪಾಸಿಟಿವ್ ಬಂದಿದೆ. ಬಳಿಕ ಜಿನೋಮ್ ಸೀಕ್ವೆನ್ಸಿಂಗ್ ಕಳುಹಿಸಿದಾಗ ಭಾನುವಾರ ವರದಿ ಬಂದಿದ್ದು ಒಮಿಕ್ರಾನ್ ಪತ್ತೆ ಅಗಿದೆ.

Edited By : Nagaraj Tulugeri
PublicNext

PublicNext

13/12/2021 11:59 am

Cinque Terre

27.42 K

Cinque Terre

0

ಸಂಬಂಧಿತ ಸುದ್ದಿ