ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಇಂದಿನಿಂದ

ಬೆಂಗಳೂರು: 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ನಿರೋಧಕ ಲಸಿಕೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದ್ದು ಇಂದಿನಿಂದ (ಜ.3) ಲಸಿಕಾ ಅಭಿಯಾನ ಆರಂಭವಾಗಲಿದೆ. ಇದಕ್ಕಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಎಲ್ಲ ರೀತಿಯ ತಯಾರಿ ನಡೆಸಿಕೊಂಡಿದ್ದಾರೆ. ಸದ್ಯ ಈ ಅಭಿಯಾನದಲ್ಲಿ 'ಕೊವ್ಯಾಕ್ಸಿನ್' ಲಸಿಕೆ ನೀಡಲಾಗುತ್ತದೆ.

ರಾಜ್ಯದಲ್ಲಿ ಈ ವಯೋಮಾನದ 31.75 ಲಕ್ಷ ಮಕ್ಕಳು ಲಸಿಕೆ ಪಡೆಯಲಿದ್ದಾರೆ. ಮೊದಲ ದಿನವೇ ನಾಲ್ಕು ಸಾವಿರಕ್ಕಿಂತ ಹೆಚ್ಚು ಕೇಂದ್ರಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

Edited By : Nagaraj Tulugeri
PublicNext

PublicNext

03/01/2022 07:52 am

Cinque Terre

121.85 K

Cinque Terre

0

ಸಂಬಂಧಿತ ಸುದ್ದಿ