ಬೆಂಗಳೂರು: ಹೆಮ್ಮಾರಿ ಸೋಂಕಿನ ಮಧ್ಯೆ ರೂಪಾಂತರಿ ವೈರಸ್ ಒಮಿಕ್ರಾನ್ ಎಂಬ ವೈರಸ್ ಸದ್ದು ಹೆಚ್ಚಾಗುತ್ತಿದೆ. ಇದರ ಮಧ್ಯೆ ರಾಜ್ಯದ ರಕ್ಷಣೆಗೆ ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಮಹತ್ವದ ಸಭೆ ನಡೆಸಲಿದ್ದಾರೆ.
ಹೌದು ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಮತ್ತು ಒಮಿಕ್ರಾನ್ ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ನಾಳೆ ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಲಾಕ್ ಡೌನ್ ಮಾಡಿ ಆದ ಅನುಭವಗಳು, ಆರೋಗ್ಯ ವ್ಯವಸ್ಥೆ, ಕೋವಿಡ್ ಮುನ್ನೆಚ್ಚರಿಕೆ ಯಾವ ರೀತಿ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಮತ್ತು ಜನತೆಗೆ ಸಹ ಗೊತ್ತಾಗಿದೆ.
ಈ ಸಂದರ್ಭದಲ್ಲಿ ಜನ ಸ್ವ ನಿರ್ಬಂಧ ಹಾಕಿಕೊಳ್ಳಲೇಬೇಕು. ಸ್ವಯಂ ನಿಯಂತ್ರಣ ಮಾಡಿಕೊಂಡು ಆರೋಗ್ಯ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಕಷ್ಟವಾಗುತ್ತದೆ ಎಂದರು. ಹಾಗಾಗಿ ಎಲ್ಲರೂ ಜೊತೆಗೂಡಿ ಒಮಿಕ್ರಾನ್ ಹಿಮ್ಮೆಟ್ಟಿಸಬೇಕು ಎಂದರು.
PublicNext
03/01/2022 12:28 pm