ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ವೀಕೆಂಡ್ ಲಾಕ್ಡೌನ್ ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಎಲ್ಲ ಬಾರ್ ಅಂಡ್ ರೆಸ್ಟೊಂರೆಂಟ್ ಮಾಲೀಕರು ಸಹಕರಿಸಬೇಕು. ರಾಜ್ಯದ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ಸಂಪೂರ್ಣವಾಗಿ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ' ಎಂದು ತಿಳಿಸಿದ್ದಾರೆ.
PublicNext
07/01/2022 04:10 pm