ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ವೀಕೆಂಡ್ ಮತ್ತು ನೈಟ್ ಕರ್ಫ್ಯೂ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಸೋಂಕು ಕೊರೊನಾ ಹಾವಳಿ ಹೆಚ್ಚಾದ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು

1) ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ನಿರ್ಧರಿಸಲಾಯಿತು.

2) ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ತೀರ್ಮಾನಿಸಲಾಯಿತು.

4) ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲು

5) ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ.

6) ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚನೆ.

7) ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿ.

8) ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸುವಂತೆ ಸೂಚನೆ.

9) ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸಿ.

10) ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧಾರ.

11) ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರ್ ಪ್ರಾರಂಭ.

12) ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚನೆ.

13) ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3 ನೇ ಡೋಸ್ ಆದ್ಯತೆ ಮೇರೆಗೆ ನೀಡಲು ಸೂಚನೆ.

14) ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಿಸಲು ಸೂಚನೆ.

15) ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ.

16) ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ.

17) ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

Edited By : Nirmala Aralikatti
PublicNext

PublicNext

11/01/2022 06:27 pm

Cinque Terre

60.82 K

Cinque Terre

11

ಸಂಬಂಧಿತ ಸುದ್ದಿ