ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಗರದಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ ಅಷ್ಟೇ ಅಲ್ಲ ಡೇ ಟೈಂನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ವೇಳೆ ಯಾವುದೇ ರ್‍ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದರು.
PublicNext
17/01/2022 04:21 pm