ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೀಕೆಂಡ್ ಕರ್ಫ್ಯೂ ರದ್ದು ಹಿನ್ನೆಲೆ: ಸರ್ಕಾರಿ ನೌಕರರಿಗೆ ಇನ್ಮುಂದೆ 6 ದಿನ ಕೆಲಸ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಿಸಲಾಗಿತ್ತು. ವೀಕೆಂಡ್ ಕರ್ಪ್ಯೂ ರದ್ದುಗೊಂಡ ಹಿನ್ನೆಲೆ ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ಕರ್ತವ್ಯ ನಿರ್ವಹಿಸಲು ಸರ್ಕಾರ ಸೂಚಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ವಾರಾಂತ್ಯದಲ್ಲಿ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸುವಂತೆ ಸೂಚಿಸಿದ್ದಾರೆ. ಈ ಮೂಲಕ ವಾರದ 6 ದಿನ ಕೆಲಸ ನಿರ್ವಹಿಸೋದಕ್ಕೆ ತಿಳಿಸಲಾಗಿದೆ.

Edited By : Nagaraj Tulugeri
PublicNext

PublicNext

27/01/2022 09:27 pm

Cinque Terre

65.76 K

Cinque Terre

4

ಸಂಬಂಧಿತ ಸುದ್ದಿ