ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ನಿರ್ಬಂಧ ಸಡಿಲಿಕೆಗೆ ಸಂಬಂಧಿಸಿದಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ರಾಜ್ಯದಲ್ಲಿ ಶೇ. 50ರ ಮಿತಿ ನಿರ್ಬಂಧ ಸಡಿಲಿಕೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು. ಇದರೊಂದಿಗೆ ನೈಟ್ ಕರ್ಫ್ಯೂ ಸಮಯ ಬದಲಾವಣೆ, ಕರ್ಫ್ಯೂ ಮುಂದುವರಿಕೆ, ಬೆಂಗಳೂರಿನಲ್ಲಿ 1ರಿಂದ 9ನೇ ತರಗತಿ ಆರಂಭ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸುವ ಸಾಧ್ಯತೆ ಇದೆ. ನೈಟ್ ಕರ್ಫ್ಯೂ ಮುಂದುವರಿಕೆ ಇಲ್ಲವೇ ಸಮಯ ಬದಲಾವಣೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಶಾಲೆ ತೆರೆಯಲು ಶಿಫಾರಸು ಮಾಡಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಈಜುಕೊಳ, ಜಿಮ್, ಹೋಟೆಲ್, ಬಾರ್, ರೆಸ್ಟೋರೆಂಟ್, ಸಭಾಂಗಣಗಳಲ್ಲಿ ಶೇಕಡ 50 ರ ಮಿತಿ ಸಡಿಲಿಕೆ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.
PublicNext
29/01/2022 07:29 am