ಬೆಂಗಳೂರು: ಹೆಮ್ಮಾರಿ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜಾರಿಗೆ ತಂದಿರುವ ನಿರ್ಬಂಧ ಸಡಿಲಿಕೆಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಭೆಗೂ ಮುನ್ನ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ. ಈ ವೇಳೆ ಸಭೆಯಲ್ಲಿ ತಜ್ಞರ ಅಭಿಪ್ರಾಯ ಪಡೆಯುತ್ತೇವೆ. ಶೇ. 50 ರೂಲ್ಸ್ ವಿನಾಯ್ತಿ ಬಗ್ಗೆ ಚರ್ಚೆ ಮಾಡಿ ತಜ್ಞರ ಅಭಿಪ್ರಾಯ ಪಡೆದು ನಿರ್ಧಾರಕ್ಕೆ ಬರುತ್ತೇವೆ ಎಂದು ಮಾಹಿತಿ ನೀಡಿದರು.
PublicNext
29/01/2022 11:47 am