ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

RT-PCR, ಕ್ವಾರಂಟೈನ್​ ಕಡ್ಡಾಯವಲ್ಲ: ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ​

ನವದೆಹಲಿ: ದೇಶದಲ್ಲಿ ದೈನಂದಿನ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿರುವ ಹಿನ್ನೆಲೆಯಲ್ಲಿ ಇದೀಗ ಅಂತರರಾಷ್ಟ್ರೀಯ ಪ್ರಯಾಣ ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತಂದು ಹೊಸ ಪ್ರಕಟಣೆ ಹೊರಡಿಸಿದೆ.

ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಫೆಬ್ರವರಿ 14ರಿಂದ ಜಾರಿಗೊಳ್ಳಲಿದೆ. ಅದರಂತೆ, ವಿದೇಶಿ ಪ್ರಯಾಣಿಕರು ವಿಮಾನಗಳಲ್ಲಿ ಪ್ರಯಾಣಿಸಲು ಆರ್​​ಟಿ-ಪಿಸಿಆರ್​ ಹಾಗೂ ಕ್ವಾರಂಟೈನ್​ ಕಡ್ಡಾಯವಲ್ಲ. ಆದರೆ ರೋಗ ಲಕ್ಷಣ ಕಾಣಿಸಿಕೊಂಡಿರುವವರು 14 ದಿನಗಳ ಕಾಲ ಸ್ವಯಂ ನಿರ್ಬಂಧಕ್ಕೆ ಒಳಗಾಗಬೇಕು.

ಕೇಂದ್ರ ಆರೋಗ್ಯ ಸಚಿವಾಲಯ ಈ ಮಾರ್ಗಸೂಚಿ ಹೊರಡಿಸಿದ್ದು, ತಾವು ಪ್ರಯಾಣ ಬೆಳೆಸಿದ 72 ಗಂಟೆಗಳ ಒಳಗೆ ಕೋವಿಡ್​ ಆರ್​​ಟಿ-ಪಿಸಿಆರ್​ ಪರೀಕ್ಷೆಯ ನೆಗೆಟಿವ್​ ವರದಿ ಅಪ್​ಲೋಡ್ ಮಾಡಬೇಕು. ಇದರ ಜೊತೆಗೆ ಕೋವಿಡ್​ ವ್ಯಾಕ್ಸಿನ್​​ನ ಎರಡು ಡೋಸ್​ ಪಡೆದುಕೊಂಡಿರುವ ಬಗ್ಗೆ ಪ್ರಮಾಣ ಪತ್ರ ಸಹ ಅಪ್​ಲೋಡ್ ಮಾಡುವಂತೆ ತಿಳಿಸಿದೆ. ಇದಕ್ಕಾಗಿ ಏರ್​ ಸುವಿಧಾ ವೆಬ್​ ಪೋರ್ಟಲ್ ಓಪನ್ ಮಾಡಿದೆ.

ಅಪಾಯದಲ್ಲಿರುವ ರಾಷ್ಟ್ರಗಳು ಮತ್ತು ಇತರೆ ರಾಷ್ಟ್ರಗಳ ನಡುವಿನ ಪ್ರತ್ಯೇಕತೆ ತೆಗೆದು ಹಾಕಲಾಗಿದ್ದು, ಯಾವುದೇ ದೇಶದಿಂದ ಬಂದರೂ ಕೂಡ 14 ದಿನಗಳ ಕಾಲ ಸ್ವಯಂ ನಿಗಾ ವಹಿಸಬೇಕು ಎಂದು ತಿಳಿಸಿದೆ. ಪ್ರಮುಖವಾಗಿ ಕೆನಡಾ, ಹಾಂಗ್ ಕಾಂಗ್, ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಬಹ್ರೇನ್, ಕತಾರ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳು ಸೇರಿ ಒಟ್ಟು 82 ದೇಶಗಳಿಂದ ಬರುವವರಿಗೆ ಈ ಆಯ್ಕೆ ಸೌಲಭ್ಯ ನೀಡಲಾಗಿದೆ.

Edited By : Vijay Kumar
PublicNext

PublicNext

11/02/2022 08:08 am

Cinque Terre

37.63 K

Cinque Terre

0

ಸಂಬಂಧಿತ ಸುದ್ದಿ