ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಗಸ್ಟ್‌ನಲ್ಲಿ ಕೋವಿಡ್ 4ನೇ ಅಲೆ.!- ಹೆಮ್ಮಾರಿ ಎದುರಿಸಲು ಸಿದ್ಧ ಎಂದ ಡಾ.ಸುಧಾಕರ್

ಬೆಂಗಳೂರು: ಆಗಸ್ಟ್ ತಿಂಗಳಿನಲ್ಲಿ ಕೋವಿಡ್ ನಾಲ್ಕನೇ ಅಲೆ ಬರುವ ಸಾಧ್ಯತೆ ಇದ್ದು, ಈ ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಶಶಿಲ್ ನಮೋಶಿ, ವಿಶ್ವದ ಬೇರೆ ಬೇರೆ ದೇಶಗಳಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಅನೇಕ ದೇಶಗಳಲ್ಲಿ ಲಾಕ್‌ಡೌನ್ ನಂತಹ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.‌ ಹಾಗಾಗಿ ರಾಜ್ಯದಲ್ಲಿ 4ನೇ ಅಲೆ ತಡೆಗೆ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಕಾನ್ಪುರ ಐಐಟಿಯು ದೇಶದಲ್ಲಿ 4ನೇ ಅಲೆ ಆಗಸ್ಟ್‌ನಲ್ಲಿ ಬರುತ್ತದೆ ಎಂದು ವರದಿ ನೀಡಿದೆ. ಇದರ ಆಧಾರದಲ್ಲಿ ಭಾರತದಲ್ಲಿ ಕೊರೊನಾ‌ 4ನೇ ಅಲೆ ಆಗಸ್ಟ್ ನಲ್ಲಿ ಬರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಆದರೆ ನಮ್ಮ ದೇಶದಲ್ಲಿ ಲಸಿಕಾ ಅಭಿಯಾನ ಮಾಡಲಾಗಿರುವುದರಿಂದಾಗಿ ಹೆಚ್ಚು ಸಮಸ್ಯೆ ಆಗುವುದಿಲ್ಲ ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

21/03/2022 07:10 pm

Cinque Terre

29.5 K

Cinque Terre

3

ಸಂಬಂಧಿತ ಸುದ್ದಿ