ಬೆಂಗಳೂರು : ದೇಶದ ಕೆಲವು ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಮಾರ್ಗಸೂಚಿ ಹೊರಡಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ ಎರಡು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಯಾಣದ ವೇಳೆ ಮಾಸ್ಕ್ ಕಡ್ಡಾಯವಾಗಿಸಿ ಇಂದು ಅಧಿಕೃತ ಆದೇಶ ಹೊರಡಿಸಿದೆ. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡದ ಜೊತೆಗೆ ಶಿಕ್ಷೆಯಾಗುತ್ತದೆ ಎಂದು ತಿಳಿಸಲಾಗಿದೆ.
PublicNext
25/04/2022 09:13 pm