ಬೆಂಗಳೂರು: ಕೊರೊನಾ ಸೋಂಕಿನ ಸಕ್ರಿಯ ಪ್ರಕರಣ ಹಾಗೂ ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಕಡ್ಡಾಯಗೊಳಿಸಲಾಗಿದೆ.
ಮಾಸ್ಕ ಕಡ್ಡಾಯಗೊಳಿಸಲು ಮಾರ್ಷಲ್ಸ್ ಮತ್ತು ಪೊಲೀಸರು ಸಹಾಯ ಪಡೆಯುವುದು. ಶಾಪಿಂಗ್ ಮಾಲ್, ರೆಸ್ಟೋರೆಂಟ್, ಪಬ್, ಥಿಯೇಟರ್, ಹೊಟೇಲ್, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿ ಕಾರ್ಖಾನೆ ಎಲ್ಲಾ ಕಡೆ ಕಡ್ಡಾಯವಾಗಿ ಧರಿಸಿರಬೇಕು. ಮಾಸ್ಕ್ ಹಾಕಿಕೊಂಡು ಬರದಿದ್ದರೆ ಪ್ರವೇಶ ನಿಷೇಧ. ಆಯಾಯ ಸಂಸ್ಥೆಯ ಆಡಳಿತ ಸಂಸ್ಥೆ ಮತ್ತು ಮಾಲೀಕರು ಜವಾಬ್ದಾರಿ ತೆಗೆದುಕೊಳ್ಳಬೇಕು.
ಬಸ್, ರೈಲು, ಸ್ವಂತ ವಾಹನಗಳಲ್ಲಿ ಓಡಾಡಬೇಕಾದ್ರೆ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಐಎಲ್‍ಐ, ಸಾರಿ ಮತ್ತು ಇತರ ಅರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ರಿಸಲ್ಟ್ ಬರುವವರೆಗೂ ಮನೆಯಲ್ಲಿ ಪ್ರತ್ಯೇಕವಾಗಿ ಇರಬೇಕು. ಅರ್ಹ ಫಲಾನುಭವಿಗಳು ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಪಡೆಯಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಕೆಲದಿನಗಳಿಂದ 300ಕ್ಕೂ ಅಧಿಕ ಕೇಸ್‌ಗಳು ದಾಖಲಾಗುತ್ತಿದ್ದು, ಬೆಂಗಳೂರು ನಗರದಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ ಇದೀಗ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದೆ.
PublicNext
10/06/2022 08:57 pm