ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಚ್ಚಿದ ಮಂಕಿಪಾಕ್ಸ್‌ ಆತಂಕ; ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ ಅಮೆರಿಕ

ವಾಷಿಂಗ್ಟನ್: ಅಮೆರಿಕದಲ್ಲಿ 7,100ಕ್ಕೂ ಹೆಚ್ಚು ಜನರಿಗೆ ಮಂಕಿಪಾಕ್ಸ್ ಸೋಂಕು ತಗುಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಜಗತ್ತಿನಾದ್ಯಂತ ಮಂಕಿಪಾಕ್ಸ್‌ನ ಅಬ್ಬರ ಜೋರಾಗಿದೆ. ಕೊರೊನಾ ಪ್ರಕರಣಗಳ ಏರಿಕೆ ಬೆನ್ನಲ್ಲೇ ಮಂಕಿಪಾಕ್ಸ್ ಸೋಂಕೂ ಸಹ ಏರಿಕೆ ಆಗುತ್ತಲೇ ಇದೆ. ಅಮೆರಿಕ, ಬ್ರಿಟನ್, ಸಿಂಗಾಪುರ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮುಂಜಾಗ್ರತೆ ಕ್ರಮವಾಗಿ ಅಮೆರಿಕದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಭಾರತದಲ್ಲಿ ಈಗಾಗಲೇ 9 ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿವೆ. ಅದರಲ್ಲಿ ಕೇರಳದ ಸೋಂಕಿತ ಯುವಕನೊಬ್ಬ ಮೃತಪಟ್ಟಿದ್ದಾನೆ.

Edited By : Vijay Kumar
PublicNext

PublicNext

05/08/2022 02:49 pm

Cinque Terre

25.22 K

Cinque Terre

1

ಸಂಬಂಧಿತ ಸುದ್ದಿ