ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

5 ದಿನಗಳ ಕಾಲ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ: ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿದ್ದು, 5 ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ಕೊಡಲಾಗಿದೆ. ಆದರೆ ಮೆರವಣಿಗೆಗೆ, ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಜ್ಞರಾದ ಡಾ.ದೇವಿಶೆಟ್ಟಿ, ಡಾ.ಮಂಜುನಾಥ್, ವೈರಾಲಜಿಸ್ಟ್ ಡಾ.ರವಿ, ಡಾ.ಸುದರ್ಶನ್, ಕಂದಾಯ ಸಚಿವ ಅಶೋಕ್, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಮಾರ್ಗಸೂಚಿ ಇಲ್ಲಿದೆ ನೋಡಿ:

* ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರದ ಅನುಮತಿ ಸಿಕ್ಕಿದೆಯಾದರೂ ಬೀದಿಗೆ ಒಂದರಂತೆ ಗಣೇಶ ಪ್ರತಿಷ್ಠಾಪಿಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಸರಳವಾಗಿ ಗಣೇಶೋತ್ಸವ ಆಚರಣೆ ಮಾಡಬೇಕು, ಏರಿಯಾಗೆ ಇಂತಿಷ್ಟೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿದ್ದು, ಬಿಬಿಎಂಪಿ, ಜಿಲ್ಲಾಡಳಿತದ ಅನುಮತಿ ಪಡೆಯಲೇಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

* ರಾಜ್ಯದ ನಗರ ಪ್ರದೇಶಗಳಲ್ಲಿ ಗರಿಷ್ಠ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ನಗರಗಳಲ್ಲಿ ವಾರ್ಡ್‌ಗೆ 1 ಮೂರ್ತಿ ಮಾತ್ರ ಪ್ರತಿಷ್ಠಾಪಿಸಬೇಕು. ಗ್ರಾಮಗಳಲ್ಲಿ ಸ್ಥಳೀಯ ಆಡಳಿತ ಅನುಮತಿ ಮೇರೆಗೆ ಸಾರ್ವಜನಿಕ ಉತ್ಸವ ನಡೆಸಲು ಅವಕಾಶ ನೀಡಲಾಗಿದೆ.

* ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತಿಲ್ಲ. ನಿಗದಿತ ಸ್ಥಳಗಳಲ್ಲಿ ಮಾತ್ರ ಗಣೇಶ ಮೂರ್ತಿ ವಿಸರ್ಜಿಸಬೇಕು

ಎಲ್ಲೂ ಮೆರವಣಿಗೆ ಮಾಡುವಂತಿಲ್ಲ. ಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ಸರಾಸರಿ ಶೇ 2ಕ್ಕಿಂತ ಕಡಿಮೆ ಇದ್ದರೆ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ಸಿಗಲಿದೆ.

* ಶಾಲಾ-ಕಾಲೇಜುಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತಿಲ್ಲ. ಕಾರ್ಯಕ್ರಮಗಳಲ್ಲಿ ಡಿಜೆ ಬಳಕೆ ನಿರ್ಬಂಧಿಸಲಾಗಿದೆ. ಮೂರ್ತಿ ವಿಸರ್ಜನೆ ವೇಳೆ ಸಾರ್ವಜನಿಕರಿಗೆ ತೊಂದರೆ ನೀಡಬಾರದು. ಕಾರ್ಯಕ್ರಮಕ್ಕೆ 50X50 ಅಡಿ ಪೆಂಡಾಲ್ ಮಾತ್ರ ಹಾಕಬೇಕು.

*ಅಪಾರ್ಟ್‌ಮೆಂಟ್‌ಗಳಲ್ಲೂ 20ಕ್ಕೂ ಹೆಚ್ಚು ಜನ ಸೇರಬಾರದು. ಆಯಾ ಸಮಿತಿಯವರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಹಬ್ಬ ಆಚರಣೆ ಸ್ಥಳದಲ್ಲಿ ಲಸಿಕೆ ಅಭಿಯಾನ ನಡೆಸಬೇಕು. ಮನೆಗಳಲ್ಲಿ 2 ಅಡಿ, ಸಾರ್ವಜನಿಕವಾಗಿ 4 ಅಡಿ ಮೂರ್ತಿ ಕೂಡಿಸಲು ಅವಕಾಶವಿದೆ ಎಂದು ಆಶೋಕ ಹೇಳಿದ್ದಾರೆ. ರಾಜ್ಯದಲ್ಲಿ ನೈಟ್ ಕರ್ಫ್ಯೂ ಯಥಾಸ್ಥಿತಿ ಮುಂದುವರಿಯಲಿದೆ. ಗ್ರಾಮಗಳಲ್ಲೂ ಕೇವಲ ಒಂದು ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ ಎಂದು ಹೇಳಿದರು.

Edited By : Vijay Kumar
PublicNext

PublicNext

05/09/2021 06:31 pm

Cinque Terre

62.9 K

Cinque Terre

6

ಸಂಬಂಧಿತ ಸುದ್ದಿ