ಬೆಂಗಳೂರು: ಕೊರೊನಾ ರೂಪಾಂತರಿ ವೈರಸ್ ಹರಡುವ ಭೀತಿಯಿಂದ ಸ್ಥಗಿತಗೊಂಡಿದ್ದ ಬ್ರಿಟನ್‌ನಿಂದ ಬರುವ ವಿಮಾನಗಳ ಸಂಚಾರ ಪುನಾರಂಭಗೊಂಡಿದೆ. ಈ ಮೂಲಕ ಇಂದು (ಜ.10) ಮುಂಜಾನೆ 4 ಗಂಟೆ ಸುಮಾರಿಗೆ ಯುಕೆಯಿಂದ ಸುಮಾರು 330 ಪ್ರಯಾಣಿಕರನ್ನು ಒಳಗೊಂಡ ಮೊದಲ ವಿಮಾನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ.
ಇಂಗ್ಲೆಂಡ್ ನಿಂದ ಪ್ರಯಾಣಿಕರನ್ನು ಟರ್ಮಿನಲ್ ಒಳ ಭಾಗದಲ್ಲೇ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ಸಂಜೆ 4 ಗಂಟೆಗೆ ಪರೀಕ್ಷಾ ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಸಂಜೆ 4 ಗಂಟೆವರೆಗೂ ಎಲ್ಲಾ ಪ್ರಯಾಣಿಕರು ಟರ್ಮಿನಲ್ ಒಳಗೆ ಇರಬೇಕಿದೆ. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಪ್ರಯಾಣಿಕರಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇತ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಪ್ರಯಾಣಿಕರಿಗೆ ಸ್ಟಾಂಪಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅವರು ಮನೆಯಲ್ಲೇ ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯವಾಗಿದೆ. ಈಗಾಗಲೇ ಬ್ರಿಟನ್‌ನಿಂದ ಭಾರತಕ್ಕೆ ಬಂದವರ ಪೈಕಿ ಹಲವರನ್ನು ಪರೀಕ್ಷೆಗೆ ಗುರಿಪಡಿಸಲಾಗಿದ್ದು, ಕೆಲವರಿಗೆ ರೂಪಾಂತರಿ ಕೊರೊನಾ ತಗುಲಿದೆ.
PublicNext
10/01/2021 08:49 am