ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 16 ಲಕ್ಷ ಕೊರೋನಾ ವಾರಿಯರ್ಸ್ ಗೆ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತು ಮಾಹಿತಿ ನೀಡಿದರು. ರಾಜ್ಯದಲ್ಲಿ 235 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಮೊದಲ ಹಂತದಲ್ಲಿ ಜನವರಿ 16 ರಿಂದ 16 ಲಕ್ಷ ಕೊರೋನಾ ಯೋಧರಿಕೆ ಲಸಿಕೆ ನೀಡಲಾಗುವುದು ಎಂದರು.
PublicNext
11/01/2021 09:08 pm