ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ 7064 ಪ್ರಧಾನಮಂತ್ರಿ ಜನೌಷಧಿ ಮಳಿಗೆಗಳಲ್ಲಿ 484 ಕೋಟಿ ರೂಪಾಯಿ ಮೊತ್ತದ ದಾಖಲೆ ಪ್ರಮಾಣದ ವಹಿವಾಟು ನಡೆದಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸದಾನಂದಗೌಡ, ಭಾರತೀಯ ಜನೌಷಧಿ ಮಳಿಗೆಗಳಿಂದ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆದು ಗುಣಮಟ್ಟದ ಜೆನರಿಕ್ ಔಷಧಿಗಳನ್ನು ಮಾರಾಟ ಮಾಡುತ್ತಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ 60 ರಷ್ಟು ವಹಿವಾಟು ಹೆಚ್ಚಳವಾಗಿದೆ ಎಂದಿದ್ದಾರೆ.
ಜನೌಷಧಿ ಮಳಿಗೆಗಳಲ್ಲಿ ಔಷಧಿ ಖರೀದಿ ಮಾಡಿದ ಪರಿಣಾಮ ದೇಶದ ಜನರಿಗೆ 3000 ಕೋಟಿ ರೂಪಾಯಿ ಉಳಿತಾಯವಾಗಿದೆ. ಜನಸಾಮಾನ್ಯರು ಕೈಗೆಟಕುವ ದರದಲ್ಲಿ ಔಷಧಿ ಖರೀದಿಸಲು ಇದರಿಂದ ಉಪಯೋಗವಾಗಿದೆ ಎಂದು ಸದಾನಂದಗೌಡ ತಿಳಿಸಿದ್ದಾರೆ.
PublicNext
15/01/2021 08:28 am