ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ- ಧಾರವಾಡಕ್ಕೂ ಶೀಘ್ರ ಕ್ಯಾನ್ಸರ್‌ ಆಸ್ಪತ್ರೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆ (ಕ್ಯಾನ್ಸರ್‌) ಮಾದರಿಯಲ್ಲೇ ಹುಬ್ಬಳ್ಳಿ- ಧಾರವಾಡಕ್ಕೂ ಶೀಘ್ರ ಕ್ಯಾನ್ಸರ್‌ ಆಸ್ಪತ್ರೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಇಸ್ಫೋಸಿಸ್ ವತಿಯಿಂದ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ಕಟ್ಟಡ ಹಾಗೂ ಹಲವು ವಿಶೇಷ ಸೌಲಭ್ಯಗಳನ್ನು ಸಿಎಂ ಸೋಮವಾರ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, "ಹುಬ್ಬಳ್ಳಿ-ಧಾರವಾಡ ಭಾಗಕ್ಕೆ ಒಂದು ಸುಸಜ್ಜಿತ ಕ್ಯಾನ್ಸರ್‌ ಆಸ್ಪತ್ರೆ ನಿರ್ಮಾಣ ಮಾಡುವ ಹಾಗೂ ರಾಜ್ಯಾದ್ಯಂತ ಸರ್ಕಾರಿ ಕ್ಯಾನ್ಸರ್‌ ಆಸ್ಪತ್ರೆಗಳಲ್ಲಿ ಕಡಿಮೆ ದರದಲ್ಲಿ ಔಷಧಿ ಒದಗಿಸಲು ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ವ್ಯವಸ್ಥೆ ಮಾಡುವ ಚಿಂತನೆಯಿದೆ" ಎಂದು ತಿಳಿಸಿದರು.

ಈಗಾಗಲೇ ಶಿವಮೊಗ್ಗ, ಕಲಬುರಗಿಯಲ್ಲಿ ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆ ಶಾಖೆಗಳು ಪ್ರಾರಂಭವಾಗಿವೆ. ಸದ್ಯದಲ್ಲೇ ಹುಬ್ಬಳ್ಳಿ-ಧಾರವಾಡ ಭಾಗಕ್ಕೂ ಒಂದು ಆಸ್ಪತ್ರೆ ನಿರ್ಮಿಸಲು ಸಿದ್ಧರಿದ್ದು, ಇದಕ್ಕೆ ಬೇಕಾದ ಸಿದ್ಧತೆಯನ್ನು ಕಿದ್ವಾಯಿ ಸಂಸ್ಥೆ ಹಾಗೂ ಆರೋಗ್ಯ ಇಲಾಖೆ ಮಾಡಿಕೊಳ್ಳಬೇಕು ಎಂದರು.

Edited By : Vijay Kumar
PublicNext

PublicNext

24/08/2021 01:20 pm

Cinque Terre

46.11 K

Cinque Terre

3

ಸಂಬಂಧಿತ ಸುದ್ದಿ