ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವು ರಾಜ್ಯಾದ್ಯಂತ ವಿಧಿಸಿದ್ದ ನೈಟ್ ಕರ್ಫ್ಯೂ ಹಿಂಪಡೆದು ಇಂದು (ನವೆಂಬರ್ 5) ಆದೇಶವನ್ನು ಹೊರಡಿಸಿದೆ.

ಈ ಮೊದಲು ರಾತ್ರಿ 10ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿತ್ತು.. ಸದ್ಯ ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯಲಾಗಿದೆ.

ಅದರಂತೆ ಕೊರೊನಾ ಹಿನ್ನೆಲೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂ ಇಂದಿನಿಂದ ಇರುವುದಿಲ್ಲ. ಕೊರೊನಾ ಕೇಸ್ ಇಳಿಮುಖ ಹಿನ್ನೆಲೆ ನೈಟ್ ಕರ್ಫ್ಯೂ ವಾಪಸ್ ಪಡೆಯಲಾಗಿದೆ. ನೈಟ್ ಕರ್ಫ್ಯೂ ಹಿಂಪಡೆದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಮುಂಜಾನೆ 5 ರವರೆಗೂ ವಿಧಿಸಿದ್ದ ನೈಟ್ ಕರ್ಫ್ಯೂ ಇವತ್ತಿನಿಂದಲೇ ಇರುವುದಿಲ್ಲ. ನಿನ್ನೆ (ನವೆಂಬರ್ 4) ಎಲ್​ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಭೌತಿಕವಾಗಿ ನಡೆಸುವುದಕ್ಕೆ ಕರ್ನಾಟಕ ಸರ್ಕಾರ ಅನುಮತಿ ನೀಡಿತ್ತು. ಅದರಂತೆ ನವೆಂಬರ್ 8 ರಿಂದ ಎಲ್​ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭವಾಗಲಿವೆ.

Edited By : Vijay Kumar
PublicNext

PublicNext

05/11/2021 04:43 pm

Cinque Terre

86.24 K

Cinque Terre

3

ಸಂಬಂಧಿತ ಸುದ್ದಿ