ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೌಷ್ಟಿಕಾಂಶ ಕೊರತೆ ಶಾಲಾ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ : ಸರಕಾರ ಪ್ರಕಟಣೆ

ಬೆಂಗಳೂರು: ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೊಟೀನ್ ಕೊರತೆಯಿಂದ ಬಳಲುತ್ತಿರುವ 6 ರಿಂದ 15 ವರ್ಷದೊಳಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ನಿನ್ನೆ ಸುತ್ತೋಲೆ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ.

ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ಒಂದರಿಂದ 8ನೇ ತರಗತಿವರೆಗೆ ಓದುತ್ತಿರುವ 14,44,322 ವಿದ್ಯಾರ್ಥಿಗಳು ಫಲಾನುಭವಿಗಳಾಗಲಿದ್ದಾರೆ. ಡಿಸೆಂಬರ್‌ 1ರಿಂದ ಪ್ರಾರಂಭವಾಗುವ ಕಾರ್ಯಕ್ರಮ ಮಾರ್ಚ್ 2022ರ ವರೆಗೆ ಮುಂದುವರೆಯಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಶೇ.74ರಷ್ಟು ವಿದ್ಯಾರ್ಥಿಗಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಕಲಬುರಗಿ ಶೇ.72.4, ಬಳ್ಳಾರಿ ಶೇ.72.3, ಕೊಪ್ಪಳ ಶೇ.70.7, ರಾಯಚೂರು ಶೇ.70.6, ಬೀದರ್‌ ಶೇ.69.1 ಮತ್ತು ವಿಜಯಪುರದಲ್ಲಿ ಶೇ.68ರಷ್ಟು ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

Edited By : Nirmala Aralikatti
PublicNext

PublicNext

25/11/2021 12:37 pm

Cinque Terre

45.87 K

Cinque Terre

3

ಸಂಬಂಧಿತ ಸುದ್ದಿ