ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಕ್ಕಿ ಜ್ವರ; ಕೇರಳದಲ್ಲಿ ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರ ಆದೇಶ

ತಿರುವನಂತಪುರಂ: ಕೊರೊನಾ,ಒಮಿಕ್ರಾನ್, ವೈರಸ್ ವ್ಯಾಪಕವಾಗಿ ಹರಡುತ್ತಿರುವುದರ ನಡುವೆಯೇ ಹಕ್ಕಿ ಜ್ವರ ಕಾಣಿಸಿಕೊಂಡು ಮತ್ತಷ್ಟು ಆತಂಕ ಸೃಷ್ಟಿಸಿದೆ.ಸದ್ಯ ಕೇರಳದ ಆಲಪ್ಪುಳದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರ ಪ್ರಕರಣ ದೃಢಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ಆಲಪ್ಪುಳ ಜಿಲ್ಲೆಯ ಕೋಟ್ಟನಾಡ್ ನಲ್ಲಿ ರೈತರೊಬ್ಬರು ಸಾಕಿದ್ದ ಸಾವಿರಾರು ಬಾತುಕೋಳಿಗಳು ಮತ್ತು ಸ್ಥಳೀಯ ಹಕ್ಕಿಗಳು ಸತ್ತ ಹಿನ್ನೆಲೆ ಅಧಿಕಾರಿಗಳು ಭೋಪಾಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ ಗೆ ಮಾದರಿಗಳನ್ನು ಕಳುಹಿಸಿದ್ದರು. ಇದೀಗ ಹಕ್ಕಿ ಜ್ವರ ಪ್ರಕರಣಗಳು ದೃಢಪಟ್ಟಿದೆ.

ಹೀಗಾಗಿ ಹಕ್ಕಿ ಜ್ವರ ಹರಡದಂತೆ ರೋಗ ಪೀಡಿತ ಪ್ರದೇಶದಲ್ಲಿರುವ ಬಾತುಕೋಳಿಗಳನ್ನು ಕೊಲ್ಲಲು ಪಶುವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ. ಇದೀಗ ಪ್ರಕರಣ ಪತ್ತೆಯಾದ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿರುವ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು ಮತ್ತು ಇತರ ಪಕ್ಷಿಗಳನ್ನು ನಾಶಗೊಳಿಸಲು ಸರ್ಕಾರ ಆದೇಶಿಸಿದೆ.

ಈ ವರ್ಷ ಕೇರಳದಲ್ಲಿ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ.

Edited By : Nirmala Aralikatti
PublicNext

PublicNext

10/12/2021 01:11 pm

Cinque Terre

44.85 K

Cinque Terre

4

ಸಂಬಂಧಿತ ಸುದ್ದಿ